1 Chronicles 23:31 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.
Kannada BSI Bible 2016
ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಯವಿುತ ಸಂಖ್ಯೆಗೆ ಸರಿಯಾಗಿ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವದೂ ಇವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.