1 Chronicles 23:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರ ಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.
Kannada BSI Bible 2016
ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಪರಿಚರ್ಯ.
Kannada Bible (KNCL) BSI 2016
ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು, ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವುದೇ ಸರ್ವೇಶ್ವರನ ಆಲಯದಲ್ಲಿ ಅವರು ಮಾಡಬೇಕಾಗಿದ್ದ ಪರಿಚರ್ಯೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು.