1 Chronicles 24:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.
Kannada BSI Bible 2016
ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೆಲ್ಲಾ ಲೇವಿಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆಯೂ ಯಾಜಕರ ಮತ್ತು ಲೇವಿಯರ ಕುಟುಂಬಪ್ರಧಾನರ ಮುಂದೆಯೂ ಚೀಟಿನಿಂದ ತಮ್ಮಲ್ಲಿ ಸರತಿಗಳನ್ನು ನೇವಿುಸಿಕೊಂಡರು.
Kannada Bible (KNCL) BSI 2016
ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ, ತಮ್ಮ ಕುಲಬಂಧುಗಳಾದ ಆರೋನ್ಯರಂತೆ, ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆ ಹಾಗೂ ಯಾಜಕರ ಮತ್ತು ಲೇವಿಯರ ಕುಟುಂಬ ಮುಖ್ಯಸ್ಥರ ಮುಂದೆ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ, ಚಾದೋಕನು, ಅಹೀಮೆಲೆಕನು, ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ, ಆರೋನನ ಪುತ್ರರಾದ ತಮ್ಮ ಸಹೋದರರಿಗೆ ಎದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಕಿರಿಯ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.