1 Chronicles 24:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈತಾಮಾರನ ಸಂತತಿಗಿಂತಲೂ ಎಲ್ಲಾಜಾರನ ಸಂತತಿಯವರಲ್ಲಿ ಹೆಚ್ಚು ಮಂದಿ ನಾಯಕರಿದ್ದರು. ಎಲ್ಲಾಜಾರನ ಸಂತತಿಯವರಲ್ಲಿ ಹದಿನಾರು ಮಂದಿ ಮತ್ತು ಈತಾಮಾರನ ಸಂತತಿಯವರಲ್ಲಿ ಎಂಟು ಮಂದಿ ನಾಯಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,
Kannada BSI Bible 2016
ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾಜಾರನ ಸಂತಾನದ ಕುಟುಂಬಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದದರಿಂದ ಎಲ್ಲಾಜಾರ್ಯರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ ಈ ವರ್ಗಗಳ ವಿಷಯವಾಗಿ ಚೀಟುಹಾಕಿದರು.
Kannada Bible (KNCL) BSI 2016
ಎಲ್ಲಾಜಾರನ ಸಂತಾನದಲ್ಲಿ ಕುಟುಂಬ ಮುಖ್ಯಸ್ಥರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದುದರಿಂದ, ಎಲ್ಲಾಜಾರ್ಯರ ಕುಟುಂಬಗಳನ್ನು ಮುಖ್ಯಸ್ಥರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈತಾಮಾರನ ಪುತ್ರರಿಗಿಂತ ಎಲಿಯಾಜರನ ಪುತ್ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದುದರಿಂದ, ಅವರು ಸಹ ಹೀಗೆಯೇ ವಿಭಾಗಿಸಿದ್ದರು. ಎಲಿಯಾಜರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟು ಮಂದಿ ಮುಖ್ಯಸ್ಥರು.