1 Chronicles 24:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿಯೊಂದು ಕುಲದಿಂದ ಚೀಟುಹಾಕುವುದರ ಮೂಲಕ ಜನರನ್ನು ಆರಿಸಿಕೊಳ್ಳಲಾಯಿತು. ಕೆಲವರನ್ನು ಪವಿತ್ರ ಸ್ಥಳದ ಸೇವೆಗಾಗಿ ಆರಿಸಿಕೊಳ್ಳಲಾಯಿತು; ಇನ್ನು ಕೆಲವರನ್ನು ಯಾಜಕರಾಗಿ ಸೇವೆಮಾಡಲು ಆರಿಸಿಕೊಳ್ಳಲಾಯಿತು; ಇವರೆಲ್ಲರೂ ಎಲ್ಲಾಜಾರ್ ಮತ್ತು ಈತಾಮಾರನ ಕುಲದವರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.
Kannada BSI Bible 2016
ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯಾಧಿಪತಿಗಳೂ ದೈವಿಕಕಾರ್ಯಗಳ ಅಧ್ಯಕ್ಷರೂ ಇರುವದರಿಂದ ಉಭಯ ಸಂತಾನಗಳವರು ಸಮಾನಸ್ಥಾನದವರು.
Kannada Bible (KNCL) BSI 2016
ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.