1 Chronicles 25:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,
Kannada BSI Bible 2016
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್‌ ಹೇಮಾನ್‌ ಯೆದುತೂನ್‌ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ದಾವೀದನೂ ಆರಾಧಕಮಂಡಲಿಯವರ ಪ್ರಧಾನರೂ ಕಿನ್ನರಿ ಸ್ವರಮಂಡಲ ತಾಳ ಇವುಗಳನ್ನು ಬಾರಿಸುತ್ತಾ ಪರವಶರಾಗಿ ಗಾಯನ ಸೇವೆಮಾಡುವದಕ್ಕೋಸ್ಕರ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ -
Kannada Bible (KNCL) BSI 2016
ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದಾವೀದನೂ, ಸೈನ್ಯಾಧಿಪತಿಗಳೂ ಆಸಾಫ್, ಹೇಮಾನ್, ಯೆದುತೂನ್; ಇವರ ಪುತ್ರರಲ್ಲಿ ಕಿನ್ನರಿಗಳಿಂದಲೂ, ವೀಣೆಗಳಿಂದಲೂ, ತಾಳಗಳಿಂದಲೂ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರವಾಗಿತ್ತು.