1 Chronicles 25:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆದುತೂನನ ಸಂತತಿಯವರಲ್ಲಿ: ಗೆದಲ್ಯ, ಜೇರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯ. ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ ಯೆದುತೂನನೊಂದಿಗೆ ಹಾರ್ಪ್ ವಾದ್ಯಗಳನ್ನು ಬಾರಿಸಿ ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.
Kannada BSI Bible 2016
ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆದುತೂನ್ಯರಲ್ಲಿ - ಗೆದಲ್ಯ, ಚೆರೀ, ಯೆಶಾಯ, [ಶಿಮ್ಮೀ] ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ ಯೆಹೋವ ಕೀರ್ತನೆಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿಯೂ ಸಹಾಯಕರು.
Kannada Bible (KNCL) BSI 2016
ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆದುತೂನನ ಪುತ್ರರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಈ ಆರು ಮಂದಿಯು ಯೆದುತೂನನ ಪುತ್ರರು. ತಮ್ಮ ತಂದೆ ಯೆದುತೂನನ ಕೈಕೆಳಗೆ ಕಿನ್ನರಿಗಳನ್ನು ಬಾರಿಸಿ, ಯೆಹೋವ ದೇವರನ್ನು ಕೊಂಡಾಡಿ, ಸ್ತುತಿಸಿ ಪ್ರವಾದಿಸುತ್ತಿದ್ದರು.