1 Chronicles 25:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೇಮಾನನು ತನ್ನ ಮಕ್ಕಳೆಲ್ಲರನ್ನು ದೇವಾಲಯದಲ್ಲಿ ಹಾಡುವದಕ್ಕಾಗಿ ಬಳಸಿಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು ಅವರನ್ನು ಆರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.
Kannada BSI Bible 2016
ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನಮಾಡುತ್ತಿದ್ದರು. ಆಸಾಫ್ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.
Kannada Bible (KNCL) BSI 2016
ದೇವರಾದ ಸರ್ವೇಶ್ವರನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ, ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಹೀಗೆ ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.