1 Chronicles 25:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರೂ ಅವರ ಸಂಬಂಧಿಕರೂ ಹಾಡುಗಳನ್ನು ಹಾಡಲು ತರಬೇತಿ ಹೊಂದಿದವರಾಗಿದ್ದರು. ಒಟ್ಟು ಇನ್ನೂರ ಎಂಭತ್ತೆಂಟು ಮಂದಿ ಗಾಯಕರು ದೇವರಿಗೆ ಸ್ತುತಿಗೀತೆ ಹಾಡಲು ತರಬೇತಿ ಹೊಂದಿದವರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು.
Kannada BSI Bible 2016
ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೂ ಯೆಹೋವಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಭತ್ತೆಂಟು ಮಂದಿ; ಇವೆಲ್ಲರೂ ಗಾಯನಪ್ರವೀಣರು.
Kannada Bible (KNCL) BSI 2016
ಇವರೂ ಸರ್ವೇಶ್ವರನ ಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಬತ್ತೆಂಟು ಮಂದಿ ಗಾಯನಪ್ರವೀಣರು ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಅವರ ಲೆಕ್ಕವೂ, ಯೆಹೋವ ದೇವರ ಹಾಡುಗಳಲ್ಲಿ ತರಬೇತುಪಡೆದ ಸಮಸ್ತ ಪ್ರವೀಣರ ಲೆಕ್ಕ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಬತ್ತೆಂಟು ಮಂದಿಯಾಗಿದ್ದರು.