1 Chronicles 25:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಬ್ಬರಿಗೂ ಕೆಲಸಗಳನ್ನು ಗೊತ್ತುಪಡಿಸಲು ಚೀಟುಹಾಕಿ ನೇಮಕ ಮಾಡಿದರು. ಅವರು ಯಾವ ಪಕ್ಷಪಾತವನ್ನೂ ಮಾಡಲಿಲ್ಲ. ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.
Kannada BSI Bible 2016
ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಂಡರು. ಚೀಟಿನ ಪ್ರಕಾರವಾಗಿ
Kannada Bible (KNCL) BSI 2016
ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ, ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆ ಎದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.