1 Chronicles 26:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆರಾರೀ ಕುಲದವರ ದ್ವಾರಪಾಲಕರು ಯಾರೆಂದರೆ: ಹೋಸ ಮತ್ತು ಅವನ ಗಂಡುಮಕ್ಕಳಲ್ಲಿ ಆರಿಸಲ್ಪಟ್ಟ ಶಿಮ್ರಿ. (ಇವನು ಚೊಚ್ಚಲ ಮಗನಲ್ಲದಿದ್ದರೂ ತಂದೆಯು ಅವನನ್ನು ಪ್ರಧಾನನ್ನಾಗಿ ಆರಿಸಿದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು.
Kannada BSI Bible 2016
ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬವನು ಪ್ರಧಾನನಾಗಿದ್ದನು. ಇವನು ಚೊಚ್ಚಲನಲ್ಲದಿದ್ದರೂ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇವಿುಸಿದನು.
Kannada Bible (KNCL) BSI 2016
ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬವನು ಮುಖ್ಯಸ್ಥನಾಗಿದ್ದನು. ಇವನು ಚೊಚ್ಚಲನಲ್ಲದಿದ್ದರೂ ತಂದೆ ಅವನನ್ನೇ ಮುಖ್ಯಸ್ಥನನ್ನಾಗಿ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮೆರಾರೀಯ ಮಕ್ಕಳಲ್ಲಿರುವ ಹೋಸ ಎಂಬವನಿಗೆ ಮಕ್ಕಳಿದ್ದರು. ಮೊದಲನೆಯವನು ಶಿಮ್ರಿಯು; ಅವನು ಚೊಚ್ಚಲ ಮಗನಲ್ಲ; ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;