1 Chronicles 26:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿದಿನ ಪೂರ್ವದಿಕ್ಕಿನ ಬಾಗಿಲಿನಲ್ಲಿ ಆರು ಮಂದಿ ಲೇವಿಯರು ಕಾವಲಿಗಿದ್ದರು; ಉತ್ತರದಿಕ್ಕಿನ ಬಾಗಿಲಿನಲ್ಲಿ ಪ್ರತಿದಿನ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ದಕ್ಷಿಣದ ಬಾಗಿಲಿನಲ್ಲಿ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ಇಬ್ಬರು ಲೇವಿಯರು ಬೆಲೆಬಾಳುವ ವಸ್ತುಗಳ ಕೋಣೆಗೆ ಕಾವಲಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು,
Kannada BSI Bible 2016
ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರಲ್ಲಿ ಪ್ರತಿದಿನವೂ ಮೂಡಣ ಬಾಗಲನ್ನು ಆರು ಮಂದಿ, ಪಡುವಣ ಬಾಗಲನ್ನು ನಾಲ್ಕು ಮಂದಿ, ತೆಂಕಣ ಬಾಗಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಲುಗಳನ್ನು ಇಬ್ಬಿಬ್ಬರು,
Kannada Bible (KNCL) BSI 2016
ಲೇವಿಯರಲ್ಲಿ ಪ್ರತಿದಿನವೂ ಪೂರ್ವ ಬಾಗಿಲನ್ನು ಆರು ಮಂದಿ, ಪಶ್ಚಿಮ ಬಾಗಿಲನ್ನು ನಾಲ್ಕು ಮಂದಿ, ದಕ್ಷಿಣ ಬಾಗಿಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಿಲುಗಳನ್ನು ಇಬ್ಬಿಬ್ಬರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ,