1 Chronicles 26:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಷಬ್ಯನು ಹೆಬ್ರೋನ್ ಸಂತಾನದವನಾಗಿದ್ದನು. ಇವನೂ ಇವನ ಸಂಬಂಧಿಕರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ಯೆಹೋವನ ಸೇವೆಗೂ ಅರಸನ ಕಾರ್ಯಕ್ಕೂ ಅಧಿಕಾರಿಗಳಾಗಿದ್ದರು. ಹಷಬ್ಯನ ವರ್ಗದಲ್ಲಿ ಒಟ್ಟು ಒಂದು ಸಾವಿರದ ಏಳುನೂರು ಮಂದಿ ಸಾಮರ್ಥ್ಯಶಾಲಿಗಳಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು.
Kannada BSI Bible 2016
ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮಪ್ರಾಂತಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವಾಕಾರ್ಯಗಳನ್ನೂ ರಾಜಕೀಯ ಕಾರ್ಯಗಳನ್ನೂ ನಡಿಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಮಂದಿ.
Kannada Bible (KNCL) BSI 2016
ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಯೇಲರೊಳಗೆ ಸರ್ವೇಶ್ವರನ ಸೇವಾಕಾರ್ಯಗಳನ್ನೂ ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಮಂದಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಬ್ರೋನಿಯರಲ್ಲಿ ಬಲವುಳ್ಳವರಾದ ಹಷಬ್ಯನೂ, ಅವನ ಸಹೋದರರೂ ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಅರಸನ ಸೇವೆಯಲ್ಲಿಯೂ ಸಾವಿರದ ಏಳು ನೂರು ಮಂದಿ ಪಶ್ಚಿಮವಾಗಿ ಯೊರ್ದನ್ ನದಿ ಈಚೆಯಲ್ಲಿ ಇಸ್ರಾಯೇಲರೊಳಗೆ ಅಧಿಪತಿಗಳಾಗಿದ್ದರು.