1 Chronicles 26:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಬ್ರೋನ್ ಸಂತಾನದ ಚರಿತ್ರೆಗನುಸಾರವಾಗಿ ಯೆರೀಯನು ಅವರ ಅಧಿಪತಿಯಾಗಿದ್ದನು. ದಾವೀದನು ನಲವತ್ತು ವರ್ಷ ಇಸ್ರೇಲಿನ ಅರಸನಾಗಿದ್ದ ಕಾಲದಲ್ಲಿ ತನ್ನ ಜನರ ಚರಿತ್ರೆಯನ್ನು ಕಂಡುಹಿಡಿದು ದಾಖಲೆ ಮಾಡಲು ಆಜ್ಞೆಯಿತ್ತಿದ್ದನು. ಗಿಲ್ಯಾದಿನ ಯಾಜೇರ್ ಎಂಬಲ್ಲಿ ಹೆಬ್ರೋನ್ ಸಂತಾನಕ್ಕೆ ಸೇರಿದವರಲ್ಲಿ ಬಹಳ ಮಂದಿ ಅನುಭವಶಾಲಿಗಳಾದ ಕಾರ್ಮಿಕರು ದೊರಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು.
Kannada BSI Bible 2016
ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಆಳಿಕೆಯ ನಾಲ್ವತ್ತನೆಯ ವರುಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಲ್ಲಿ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು;
Kannada Bible (KNCL) BSI 2016
ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಲ್ಲಿ ಅನೇಕರು ಅವರ ಗೋತ್ರದವರು ಯಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೇರೀಯನು ಮುಖ್ಯಸ್ಥನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಬ್ರೋನಿಯರಲ್ಲಿ ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀದನ ಆಳಿಕೆಯ ನಲ್ವತ್ತನೆಯ ವರ್ಷದಲ್ಲಿ ಆಯ್ಕೆಯಾಗಿದ್ದರು. ಆಗ ಗಿಲ್ಯಾದಿನ ಯಜ್ಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.