1 Chronicles 26:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೀಯನಿಗೆ ಎರಡು ಸಾವಿರದ ಏಳುನೂರು ಮಂದಿ ಸಂಬಂಧಿಕರಿದ್ದರು. ಇವರೆಲ್ಲಾ ಬಲಾಢ್ಯರೂ ಕುಟುಂಬಕ್ಕೆ ನಾಯಕರುಗಳೂ ಆಗಿದ್ದರು. ದಾವೀದನು ಇವರೆಲ್ಲರಿಗೂ ರೂಬೇನ್, ಗಾದ್, ಅರ್ಧಮನಸ್ಸೆಯವರ ಪ್ರಾಂತ್ಯಗಳಲ್ಲಿ ಯೆಹೋವನಿಗೆ ಸಂಬಂಧಿಸಿದ ಕಾರ್ಯಗಳನ್ನು, ರಾಜನಿಗೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ನೇಮಕ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
Kannada BSI Bible 2016
ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳು ನೂರು ಮಂದಿ. ಅರಸನಾದ ದಾವೀದನು ರೂಬೇನ್ ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕಕಾರ್ಯಗಳಲ್ಲಿಯೂ ರಾಜಕೀಯಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇವಿುಸಿದನು.
Kannada Bible (KNCL) BSI 2016
ಶ್ರೀಮಂತರೂ ಕುಟುಂಬಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಮಂದಿ ಇದ್ದರು. ಅರಸ ದಾವೀದನು ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲೂ ರಾಜಕೀಯ ಕಾರ್ಯಗಳಲ್ಲೂ ಅಧಿಕಾರಿಗಳನ್ನಾಗಿ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ರೂಬೇನ್ಯರ ಮೇಲೆಯೂ, ಗಾದ್ಯರ ಮೇಲೆಯೂ, ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳಾಗಿ ಮಾಡಿದನು.