1 Chronicles 27:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದ್ದರಿಂದ ದಾವೀದನು ಇಪ್ಪತ್ತು ವರ್ಷ ಪ್ರಾಯದ ಮೇಲ್ಪಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.
Kannada BSI Bible 2016
ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರುಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ.
Kannada Bible (KNCL) BSI 2016
ಇಸ್ರಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂದು ಸರ್ವೇಶ್ವರ ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಇಪ್ಪತ್ತು ವರ್ಷಗಳೊಳಗೆ ಇದ್ದವರ ಲೆಕ್ಕ ತೆಗೆದುಕೊಳ್ಳಲಿಲ್ಲ. ಏಕೆಂದರೆ, “ಇಸ್ರಾಯೇಲನನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನು,” ಎಂದು ಯೆಹೋವ ದೇವರು ಹೇಳಿದ್ದರು.