1 Chronicles 27:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್ ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್ ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,
Kannada BSI Bible 2016
ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇವಿುಸಲ್ಪಟ್ಟವರು ಯಾರಂದರೆ - ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ ಹಳ್ಳಿಗಳಲ್ಲಿಯೂ ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನ್,
Kannada Bible (KNCL) BSI 2016
ಅರಸ ದಾವೀದನ ಸೊತ್ತಿನ ಮೇಲ್ವಿಚಾರಕರಾಗಿ ನೇಮಕಗೊಂಡವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗ ಅಜ್ಮಾವೆತ್; ಹೊಲದಲ್ಲು, ಪಟ್ಟಣಗಳಲ್ಲು, ಹಳ್ಳಿಗಳಲ್ಲು ಹಾಗೂ ಬರುಜುಗಳ ಮೇಲೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನ ಬೊಕ್ಕಸಗಳ ಮೇಲೆ ಅದೀಯೇಲನ ಮಗ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಗ್ರಾಮಗಳಲ್ಲಿಯೂ, ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನನು ಇದ್ದನು.