1 Chronicles 27:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡನೆಯ ತಿಂಗಳಿನ ಸೈನ್ಯಾಧಿಕಾರಿ ಅಹೋಹೀಯನಾದ ದೋದೈ. ಮಿಕ್ಲೋತ್ ಎಂಬವನು ಈ ತಂಡದ ನಾಯಕನಾಗಿದ್ದನು. ಒಟ್ಟು ಇಪ್ಪತ್ತನಾಲ್ಕು ಸಾವಿರ ಮಂದಿ ದೋದೈನ ತಂಡದಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
Kannada BSI Bible 2016
ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು; ಆ ವರ್ಗದಲ್ಲಿ ವಿುಕ್ಲೋತನೆಂಬವನೂ ನಾಯಕನು. ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.
Kannada Bible (KNCL) BSI 2016
ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕ; ಆ ವರ್ಗದಲ್ಲಿ ಮಿಕ್ಲೋತನೆಂಬವನೂ ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯ ತಿಂಗಳಿನ ವರ್ಗದ ಮೇಲೆ ಅಹೋಹ್ಯನಾದ ದೊದಾಯಿಯು. ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು. ಅವನ ವರ್ಗದಲ್ಲಿ 24,000 ಜನರಿದ್ದರು.