1 Chronicles 28:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದ್ದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.
Kannada BSI Bible 2016
ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೋಡಿಕೋ; ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನಷ್ಟೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು ಎಂಬದೇ.
Kannada Bible (KNCL) BSI 2016
ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.