1 Chronicles 28:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.
Kannada BSI Bible 2016
ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.
Kannada Bible (KNCL) BSI 2016
ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.