1 Chronicles 28:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
Kannada BSI Bible 2016
ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.
Kannada Bible (KNCL) BSI 2016
ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.