1 Chronicles 28:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೇವರು ನನಗೆ, ‘ದಾವೀದನೇ, ನೀನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಯಾಕೆಂದರೆ ನೀನೊಬ್ಬ ರಣವೀರನಾಗಿದ್ದುದರಿಂದ ಎಷ್ಟೋ ಮಂದಿಯನ್ನು ಕೊಂದು ಅವರ ರಕ್ತಸುರಿಸಿರುವೆ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ಮಾಡಿ ಬಹಳ ರಕ್ತವನ್ನು ಸುರಿಸಿದವನು, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬಾರದು’ ಎಂದು ಹೇಳಿದನು.
Kannada BSI Bible 2016
ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವರು ನನಗೆ - ನೀನು ಮಹಾಯುದ್ಧಗಳನ್ನು ನಡಿಸಿ ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬಾರದು ಎಂದು ಹೇಳಿದನು.
Kannada Bible (KNCL) BSI 2016
ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು ನನಗೆ, ‘ನೀನು ಮಹಾ ಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.