1 Chronicles 28:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನಗೆ ಅನೇಕ ಮಕ್ಕಳನ್ನು ಕೊಟ್ಟನು. ಆ ಮಕ್ಕಳಲ್ಲಿ ಯೆಹೋವನು ಸೊಲೊಮೋನನನ್ನು ನನ್ನ ನಂತರ ಇಸ್ರೇಲರ ಅರಸನನ್ನಾಗಿ ಆರಿಸಿಕೊಂಡಿದ್ದಾನೆ. ಆದರೆ ನಿಜವಾಗಿಯೂ, ಇಸ್ರೇಲ್, ದೇವರಾದ ಯೆಹೋವನ ರಾಜ್ಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.
Kannada BSI Bible 2016
ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ದಯಪಾಲಿಸಿದ ಅನೇಕ ಮಂದಿ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್‍ಸಿಂಹಾಸನದ ಮೇಲೆ ಕುಳ್ಳಿರಿಸುವದಕ್ಕೋಸ್ಕರ ಆರಿಸಿಕೊಂಡನು.
Kannada Bible (KNCL) BSI 2016
ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ ಅನೇಕ ಪುತ್ರರನ್ನು ಕೊಟ್ಟಿರುವಾಗ, ನನ್ನ ಸಮಸ್ತ ಪುತ್ರರಲ್ಲಿ ಇಸ್ರಾಯೇಲಿನ ಮೇಲಿಗಾಗಿ, ಯೆಹೋವ ದೇವರ ರಾಜ್ಯದ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೆ ನನ್ನ ಮಗ ಸೊಲೊಮೋನನನ್ನು ಆದುಕೊಂಡರು.