1 Chronicles 28:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯನಾಗಿದ್ದಾನೆ. ಅವನು ಹೀಗೆಯೇ ಮುಂದುವರಿದರೆ ನಾನು ಅವನ ರಾಜ್ಯವನ್ನು ಶಾಶ್ವತವಾಗಿ ಬಲಗೊಳಿಸುವೆನು”‘ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.’
Kannada BSI Bible 2016
ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನೆಂದು ಹೇಳಿದ್ದಾನೆ.
Kannada Bible (KNCL) BSI 2016
ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು’ ಎಂದು ಅವರು ನನಗೆ ಹೇಳಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಹೊತ್ತಿನ ಹಾಗೆ ನನ್ನ ಆಜ್ಞೆಗಳನ್ನೂ, ನನ್ನ ನ್ಯಾಯಗಳನ್ನೂ ಅವನು ನಡೆಸಲು ದೃಢನಾಗಿದ್ದರೆ, ಅವನ ರಾಜ್ಯವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದರು.