1 Chronicles 28:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ದೇವರ ಸನ್ನಿಧಾನದಲ್ಲಿಯೂ ಎಲ್ಲಾ ಇಸ್ರೇಲರ ಮುಂದೆಯೂ ನಿಮಗಿದನ್ನು ಹೇಳುತ್ತಿದ್ದೇನೆ. ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನೀವು ಉತ್ತಮವಾದ ಈ ದೇಶವನ್ನು ಅನುಭವಿಸುವಿರಿ; ನಿಮ್ಮ ಸಂತತಿಯವರೂ ಇದರ ಸುಖವನ್ನು ಅನುಭವಿಸುವಂತೆ ಮಾಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು.
Kannada BSI Bible 2016
ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಮಂಡಲಿಯಾದ ಸಮಸ್ತ ಇಸ್ರಾಯೇಲ್ಯರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೇ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವಾಸ್ತ್ಯವಾಗಿರುವದು.
Kannada Bible (KNCL) BSI 2016
“ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನೀವು ಈ ಉತ್ತಮ ದೇಶವನ್ನು ಸ್ವಾಧೀನಮಾಡಿಕೊಂಡು, ಅದನ್ನು ನಿರಂತರದಲ್ಲಿ ನಿಮ್ಮ ತರುವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ, ಯೆಹೋವ ದೇವರ ಸಭೆಯಾದ ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿಯೂ, ನಮ್ಮ ದೇವರು ಕೇಳಿಸುವಂತೆ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಗೊಳ್ಳಿರಿ ಎಂದು ಎಚ್ಚರಿಸುತ್ತೇನೆ.