1 Chronicles 29:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. ಎಲ್ಲವನ್ನು ಆಳುವಾತನು ನೀನೇ. ನಿನ್ನ ಬಾಹುಗಳಲ್ಲಿ ಶಕ್ತಿಸಾಮರ್ಥ್ಯವು ತುಂಬಿವೆ. ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.
Kannada BSI Bible 2016
ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಭಾವೈಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ; ನೀನು ಸರ್ವಾಧಿಕಾರಿಯು; ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ; ಎಲ್ಲಾ ದೊಡ್ಡಸ್ತಿಕೆಗೂ ಶಕ್ತಿಗೂ ನೀನೇ ಮೂಲನು.
Kannada Bible (KNCL) BSI 2016
ಆಸ್ತಿ - ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ. ಸರ್ವಾಧಿಕಾರ, ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ. ಪಟ್ಟ ಪದವಿಗೆ, ಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐಶ್ವರ್ಯವೂ, ಘನವೂ ನಿಮ್ಮ ಬಳಿಯಿಂದ ಬರುತ್ತವೆ. ನೀವು ಸಮಸ್ತವನ್ನು ಆಳಿಕೆಮಾಡುವವರು. ಶಕ್ತಿಯೂ, ಪರಾಕ್ರಮವೂ ನಿಮ್ಮ ಕೈಯಲ್ಲಿ ಇವೆ. ಎಲ್ಲರಿಗೂ ಉನ್ನತಿಯನ್ನೂ, ಬಲವನ್ನೂ ಕೊಡುವುದು ನಿಮ್ಮ ಕೈಯಲ್ಲಿ ಇದೆ.