1 Chronicles 29:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.
Kannada BSI Bible 2016
ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ ನಮ್ಮ ಪಿತೃಗಳೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ, ನಮ್ಮ ಆಯುಷ್ಕಾಲವು ನೆರಳಿನಂತಿದೆ; ನಮಗೆ ಯಾವ ನಿರೀಕ್ಷೆಯೂ ಇಲ್ಲ.
Kannada Bible (KNCL) BSI 2016
ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ.