1 Chronicles 29:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.
Kannada BSI Bible 2016
ನಮ್ಮ ಪಿತೃಗಳಾದ ಅಬ್ರಹಾಕಮ್‌, ಇಸಾಕ್‌, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.
Kannada Bible (KNCL) BSI 2016
ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಿತೃಗಳಾದ ಅಬ್ರಹಾಮನ, ಇಸಾಕನ, ಇಸ್ರಾಯೇಲನ ದೇವರಾದ ಯೆಹೋವ ದೇವರೇ, ನಿಮ್ಮ ಜನರ ಹೃದಯದ ಮನೋಭಾವನೆಯಲ್ಲಿ ಭಕ್ತಿಯನ್ನು ನಿರಂತರವಾಗಿ ಕಾಪಾಡಿ, ಅವರ ಹೃದಯವನ್ನು ನಿಮಗೆ ಸಿದ್ಧಮಾಡಿ.