1 Chronicles 29:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು.
Kannada BSI Bible 2016
ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ.
Kannada Bible (KNCL) BSI 2016
ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.