1 Chronicles 29:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.
Kannada BSI Bible 2016
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ - ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ಆತನನ್ನೂ ಅರಸನನ್ನೂ ನಮಸ್ಕರಿಸಿದರು.
Kannada Bible (KNCL) BSI 2016
ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು.