1 Chronicles 29:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.
Kannada BSI Bible 2016
ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕೂತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲ್ಯರೆಲ್ಲರೂ ವಿಧೇಯರಾಗಿ ನಡೆಯುವವರಾದರು.
Kannada Bible (KNCL) BSI 2016
ಅಂದಿನಿಂದ ಸೊಲೊಮೋನನು ತನ್ನ ತಂದೆ ದಾವೀದನ ಸ್ಥಾನದಲ್ಲಿ ಅರಸನಾಗಿ, ಸರ್ವೇಶ್ವರನ ಸಿಂಹಾಸನದಲ್ಲಿ ಕುಳಿತುಕೊಂಡು, ವೃದ್ಧಿಯಾಗುತ್ತಾ ಬಂದನು. ಅರಸ ಸೊಲೊಮೋನನಿಗೆ ಇಸ್ರಯೇಲರೆಲ್ಲರೂ ವಿಧೇಯರಾಗಿ ನಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಯೆಹೋವ ದೇವರ ಸಿಂಹಾಸನದ ಮೇಲೆ ಕುಳಿತುಕೊಂಡು, ಸಮೃದ್ಧಿ ಹೊಂದಿದನು. ಸಮಸ್ತ ಇಸ್ರಾಯೇಲರು ಅವನಿಗೆ ವಿಧೇಯರಾದರು.