1 Chronicles 29:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.
Kannada BSI Bible 2016
ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಸ್ರಾಯೇಲ್ಯರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲ್ಯರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.
Kannada Bible (KNCL) BSI 2016
ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ, ಇಸ್ರಾಯೇಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸನಿಗಾದರೂ ಇಲ್ಲದಂಥ ರಾಜ್ಯದ ವೈಭವವನ್ನು ಅವನಿಗೆ ಕೊಟ್ಟರು.