1 Chronicles 29:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.
Kannada BSI Bible 2016
ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಐಶ್ವರ್ಯ ಮಾನ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.
Kannada Bible (KNCL) BSI 2016
ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ದೀರ್ಘಾಯುಷ್ಯದಿಂದಲೂ, ಐಶ್ವರ್ಯದಿಂದಲೂ, ಘನದಿಂದಲೂ ಕೂಡಿದವನಾಗಿ, ಒಳ್ಳೆಯ ಪ್ರಾಯದಲ್ಲಿ ಮರಣಹೊಂದಿದನು. ಅವನ ಮಗ ಸೊಲೊಮೋನನು ಅವನಿಗೆ ಬದಲಾಗಿ ಅರಸನಾದನು.