1 Chronicles 29:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯಕ್ಕಾಗಿ ಅವರು ಒಟ್ಟು ನೂರತೊಂಭತ್ತು ಟನ್ ತೂಕದ ಬಂಗಾರ, ಮುನ್ನೂರ ಎಪ್ಪತ್ತೈದು ಟನ್ ತೂಕದ ಬೆಳ್ಳಿ, ಆರನೂರ ಎಪ್ಪತ್ತೈದು ಟನ್ ತೂಕದ ತಾಮ್ರ ಮತ್ತು ಮೂರು ಸಾವಿರದ ಏಳುನೂರೈವತ್ತು ಟನ್ ತೂಕದ ಕಬ್ಬಿಣವನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದು ಸಾವಿರ ತಲಾಂತು, ಹತ್ತು ಸಾವಿರ ಪವನು ಬಂಗಾರವನ್ನೂ, ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ, ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ, ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು.
Kannada BSI Bible 2016
ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದು ಸಾವಿರ ತಲಾಂತು ಹತ್ತು ಸಾವಿರ ಪವನು ಬಂಗಾರವನ್ನೂ ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು.
Kannada Bible (KNCL) BSI 2016
170 ಮೆಟ್ರಿಕ್ ಟನ್ ಬಂಗಾರವನ್ನೂ 340 ಮೆಟ್ರಿಕ್ ಟನ್ ಬೆಳ್ಳಿಯನ್ನೂ 3400 ಮೆಟ್ರಿಕ್ ಟನ್ ತಾಮ್ರವನ್ನೂ 3400 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಮನೆಯ ಸೇವೆಗೋಸ್ಕರ ಬಂಗಾರವನ್ನೂ 17 0 ಮೆಟ್ರಿಕ್ ಟನ್, ಮತ್ತು 10,000 ಬಂಗಾರದ ನಾಣ್ಯಗಳನ್ನೂ 34 5 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 61 0 ಮೆಟ್ರಿಕ್ ಟನ್ ಕಂಚನ್ನೂ, 34 50 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.