1 Chronicles 29:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.
Kannada BSI Bible 2016
ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.
Kannada Bible (KNCL) BSI 2016
ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು.