1 Chronicles 4:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೇಲನ ಮಕ್ಕಳು ಮಣ್ಣಿನಿಂದ ವಸ್ತುಗಳನ್ನು ತಯಾರಿಸುತ್ತಿದ್ದರು. ನೆಟಾಯಿಮ್ ಮತ್ತು ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಅವರು ಅರಸನಿಗೋಸ್ಕರ ಕೆಲಸಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು.
Kannada BSI Bible 2016
ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲೆ ಕಂಡ ಜನರು ಕುಂಬಾರರು; ಅವರು ನೆಟಾಯಿಮ್, ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು.
Kannada Bible (KNCL) BSI 2016
ಅವರು ಅರಸನ ಸೇವೆಯಲ್ಲಿ ಕುಂಬಾರರಾಗಿದ್ದು ನೆಟಾಯಿಮ್ ಮತ್ತು ಗೆದೇರ ಪಟ್ಟಣಗಳಲ್ಲಿ ವಾಸಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.