1 Chronicles 4:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟಪ್ರಾಂತ್ಯಕ್ಕೆ ಹೋದರು. ಇಷ್ಷೀಯ ಗಂಡುಮಕ್ಕಳು ಈ ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸಿಮೆಯೋನನ ಕುಲದ ಐನೂರು ಜನರು ಸೇಯೀರ್ ಪರ್ವತಕ್ಕೆ ಹೋದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್ ಎಂಬುವವರು ಅವರ ಮುಖ್ಯಸ್ಥರು.
Kannada BSI Bible 2016
ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್‌ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಪರ್ವತಕ್ಕೆ ಹೋದರು; ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ, ಉಜ್ಜೀಯೇಲ್ ಎಂಬವರು ಅವರ ಮುಖ್ಯಸ್ಥರು.
Kannada Bible (KNCL) BSI 2016
ಸಿಮೆಯೋನನ ಕುಲದ ಇತರ ಐದುನೂರು ಜನ ಸದಸ್ಯರು ಸೇಯೀರ್ ಬೆಟ್ಟಪ್ರದೇಶದ ಮೇಲೆ ದಾಳಿಮಾಡಿದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ, ಉಜ್ಜೀಯೇಲ್ ಎಂಬವರು ಅವರ ಮುಖ್ಯಸ್ಥರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವರಲ್ಲಿ ಸಿಮೆಯೋನನ ಪುತ್ರರಲ್ಲಿ ಐನೂರು ಮಂದಿ ಇಷ್ಷೀಯ ಪುತ್ರರಾದ ಪೆಲಟ್ಯ, ನೆಯರ್ಯ, ರೆಫಾಯ, ಉಜ್ಜೀಯೇಲ್ ಎಂಬವರನ್ನು ತಮ್ಮ ಅಧಿಪತಿಗಳಾಗಿ ಮಾಡಿಕೊಂಡು. ಸೇಯೀರ್ ಎಂಬ ಪರ್ವತ ದೇಶಕ್ಕೆ ಹೋದರು.