1 Chronicles 5:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಿಲ್ಯಾದ್ ಪ್ರಾಂತ್ಯದಲ್ಲಿ ಗಾದ್ ಕುಟುಂಬದ ಜನರು ವಾಸಿಸಿದರು. ಅವರು ಬಾಷಾನ್ ಪ್ರಾಂತ್ಯದಲ್ಲಿಯೂ ಅದರ ಸುತ್ತಮುತ್ತಲಿದ್ದ ಊರುಗಳಲ್ಲಿಯೂ ಶಾರೋನ್ ಪ್ರಾಂತ್ಯದ ಹುಲ್ಲುಗಾವಲುಗಳ ಗಡಿಗಳವರೆಗೂ ನೆಲೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.
Kannada BSI Bible 2016
ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ ಅದರ ಗ್ರಾಮಗಳಲ್ಲಿಯೂ ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.
Kannada Bible (KNCL) BSI 2016
ಅವರು ಬಾಷಾನ್ ಮತ್ತು ಗಿಲ್ಯಾದ್ ಪ್ರದೇಶಗಳಲ್ಲಿಯ ಪಟ್ಟಣಗಳಲ್ಲಿಯೂ ಶಾರೋನಿನ ಹಸಿರುಗಾವಲುಗಳ ಪ್ರದೇಶಗಳಲ್ಲಿಯೂ ನೆಲೆಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಗಿಲ್ಯಾದಿನಲ್ಲಿರುವ ಬಾಷಾನಿನಲ್ಲಿಯೂ, ಅವರ ಊರುಗಳಲ್ಲಿಯೂ, ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.