1 Chronicles 5:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋತಾವು ಮತ್ತು ಯಾರೊಬ್ಬಾಮನ ಕಾಲದಲ್ಲಿ ಇವರ ಹೆಸರುಗಳನ್ನೆಲ್ಲಾ ಗಾದ್ಯರ ಸಂತಾನ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಯೋತಾವುನು ಯೆಹೂದದ ಅರಸನಾಗಿದ್ದನು ಮತ್ತು ಯಾರೊಬ್ಬಾಮನು ಇಸ್ರೇಲರ ಅರಸನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು.
Kannada BSI Bible 2016
ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು.
Kannada Bible (KNCL) BSI 2016
ಈ ದಾಖಲೆಗಳನ್ನು ಯೆಹೂದ ಅರಸ ಯೋತಾಮನ ಹಾಗು ಇಸ್ರಯೇಲ ಅರಸ ಯಾರೊಬ್ಬಾಮನ ಆಳ್ವಿಕೆಯ ದಿನಗಳಲ್ಲಿ ಸಂಗ್ರಹಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರೆಲ್ಲರು ಯೆಹೂದದ ಅರಸನಾದ ಯೋತಾಮನ ದಿವಸಗಳಲ್ಲಿಯೂ, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು.