1 Chronicles 5:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.
Kannada BSI Bible 2016
ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಹಿಂಡುಗಳನ್ನು ಅಂದರೆ ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಇವುಗಳನ್ನೂ ಲಕ್ಷ ಜನವನ್ನೂ ಕೊಳ್ಳೆಹಿಡಿದು ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.
Kannada Bible (KNCL) BSI 2016
ಯುದ್ಧವು ದೇವರ ಚಿತ್ತಾನುಸಾರವಾದದ್ದರಿಂದ ಅವರು ಅನೇಕ ವೈರಿಗಳನ್ನು ಸಂಹರಿಸಿದರು ಮತ್ತು ತಾವು ಸೆರೆಯಾಗಿ ಹೋಗುವ ಕಾಲದವರೆಗೆ ಅಲ್ಲಿಯೇ ನೆಲೆಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.