1 Chronicles 6:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ ಮತ್ತು ಜೆರುಸಲೇಮಿನ ಜನರು ಸೆರೆ ಒಯ್ಯಲ್ಪಟ್ಟಾಗ ಯೆಹೋಚಾದಾಕನೂ ಅವರೊಂದಿಗೆ ಪರದೇಶಕ್ಕೆ ಹೋಗಬೇಕಾಯಿತು. ಯೆಹೋವನು ಯೆಹೂದ್ಯರನ್ನು ಮತ್ತು ಜೆರುಸಲೇಮಿನವರನ್ನು ಪರದೇಶಕ್ಕೆ ಸೆರೆಯಾಳುಗಳಾಗಿ ಒಯ್ಯಲು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಸೆರೆಯೊಯ್ದಾಗ ಯೆಹೋಚಾದಾಕನು ಅವರೊಡನೆ ಇದ್ದನು.
Kannada BSI Bible 2016
ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಸೆರೆಯೊಯ್ದಾಗ ಈ ಯೆಹೋಚಾದಾಕನೂ ಅವರೊಡನಿದ್ದನು.
Kannada Bible (KNCL) BSI 2016
ಸರ್ವೇಶ್ವರ ಸೆರೆಗೆ ಕಳುಹಿಸಿದ ಜುದೇಯದ ಮತ್ತು ಜೆರುಸಲೇಮಿನ ಇತರ ಜನರೊಂದಿಗೆ ಅರಸ ನೆಬೂಕದ್ನೆಚ್ಚರನು ಯೆಹೋಚಾದಾಕನನ್ನು ಗಡೀಪಾರು ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ, ಯೆರೂಸಲೇಮಿನವರನ್ನು ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.