1 Chronicles 6:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದರ್ಶನಗುಡಾರದ ಮಹಾಪವಿತ್ರಸ್ಥಳದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಟ್ಟ ಬಳಿಕ ಅರಸನಾದ ದಾವೀದನು ಗಾಯಕರನ್ನು ಆರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ.
Kannada BSI Bible 2016
ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇವಿುಸಲ್ಪಟ್ಟವರ ಪಟ್ಟಿ.
Kannada Bible (KNCL) BSI 2016
ಮಂಜೂಷವನ್ನು ಜೆರುಸಲೇಮಿಗೆ ತಂದ ತರುವಾಯ ಆರಾಧನಾವಿಧಿಗಾಗಿ ಅರಸ ದಾವೀದನು ಸಂಗೀತಮಂಡಲಿಯನ್ನು ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಂಜೂಷವನ್ನು ನೆಲೆಗೊಳಿಸಿದ ತರುವಾಯ ದಾವೀದನು ಯೆಹೋವ ದೇವರ ಮನೆಯಲ್ಲಿ ವಾದ್ಯಗಾರರನ್ನು ನೇಮಿಸಿದನು.