1 Chronicles 6:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾಯನದ ಮೂಲಕ ಸೇವೆಮಾಡಿದ ತಂದೆಗಳ ಮತ್ತು ಅವರ ಗಂಡುಮಕ್ಕಳ ಪಟ್ಟಿ; ಕೆಹಾತ್ಯನ ಸಂತತಿಯವರಿಂದ ಗಾಯಕನಾದ ಹೇಮಾನ. ಇವನು ಯೋವೇಲನ ಮಗ. ಯೋವೇಲನು ಸಮುವೇಲನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.
Kannada BSI Bible 2016
ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯಸೇವಕರೂ ಅವರ ವಂಶಾವಳಿಯೂ - ಕೆಹಾತ್ಯನಾದ ಹೇಮಾನನು [ಮೊದಲನೆಯವನು].
Kannada Bible (KNCL) BSI 2016
ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇವೆಗೆ ಆಯ್ಕೆಯಾದ ವ್ಯಕ್ತಿಗಳು ಮತ್ತು ಅವರ ಪುತ್ರರ ಹೆಸರುಗಳು ಹೀಗಿವೆ: ಕೊಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಅವನು ಯೋಯೇಲನ ಮಗನು, ಅವನು ಸಮುಯೇಲನ ಮಗನು,