1 Chronicles 6:60 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬೆಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು. ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.
Kannada BSI Bible 2016
ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ ಕುಲದಿಂದ ಗೆಬ, ಆಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಪಟ್ಟಣಗಳು ಹದಿಮೂರು.
Kannada Bible (KNCL) BSI 2016
ಬೆನ್ಯಾಮೀನ್ಯರ ಪ್ರದೇಶದಲ್ಲಿ ಫಲವತ್ತಾದ ಪ್ರದೇಶಗಳನ್ನು ಒಳಗೊಂಡ ಪಟ್ಟಣಗಳು ಅಂದರೆ ಗೆಬ, ಅಲೆಮೆತ್, ಅನಾತೋತ್ ಈ ಪಟ್ಟಣಗಳನ್ನು ಅವರಿಗೆ ಕೊಡಲಾಗಿತ್ತು. ಅವರೆಲ್ಲರ ಕುಟುಂಬಗಳ ವಾಸಕ್ಕಾಗಿ ಒಟ್ಟು ಹದಿಮೂರು ಪಟ್ಟಣಗಳು ದೊರೆತವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು.