1 Chronicles 6:61 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉಳಿದ ಕೆಹಾತ್ಯನ ಸಂತತಿಯವರಿಗೆ ಮನಸ್ಸೆಯ ಅರ್ಧಕುಲದಿಂದ ಹತ್ತು ಪಟ್ಟಣಗಳು ದೊರಕಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು.
Kannada BSI Bible 2016
ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಹಾತ್ಯರ ಉಳಿದ ಕುಟುಂಬಗಳಿಗೆ ಅರ್ಧಮನಸ್ಸೆ ಕುಲದ ಸ್ವಾಸ್ತ್ಯದಿಂದ ಹತ್ತು ಪಟ್ಟಣಗಳು ದೊರಕಿದವು.
Kannada Bible (KNCL) BSI 2016
ಪಶ್ಚಿಮದಲ್ಲಿ ಮನಸ್ಸೆ ಪ್ರದೇಶದಲ್ಲಿದ್ದ ಹತ್ತು ಪಟ್ಟಣಗಳು ಕೇಹಾತನ ಗೋತ್ರದಲ್ಲಿದ್ದ ಉಳಿದವರಿಗೆ ಕುಟುಂಬ ಕುಟುಂಬವಾಗಿ ಚೀಟುಹಾಕಿ ಕೊಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಗೋತ್ರದ ಕುಟುಂಬಗಳಲ್ಲಿ ಉಳಿದ ಕೊಹಾತನ ಪುತ್ರರಿಗೂ ಚೀಟುಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ದೊರೆತವು.