1 Chronicles 6:62 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೇರ್ಷೋಮ್ಯನ ಸಂತತಿಯವರಿಗೆ ಹದಿಮೂರು ಪಟ್ಟಣಗಳು ದೊರಕಿದವು. ಇವು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನ್ ಪ್ರದೇಶದಲ್ಲಿ ವಾಸವಾಗಿದ್ದ ಅರ್ಧ ಮನಸ್ಸೆ ಕುಲದವರಿಂದ ಆ ಪಟ್ಟಣಗಳು ದೊರೆತವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು.
Kannada BSI Bible 2016
ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಅರ್ಧಮನಸ್ಸೆ ಈ ಕುಲಗಳ ಸ್ವಾಸ್ತ್ಯದಿಂದ ಹದಿಮೂರು ಪಟ್ಟಣಗಳು ದೊರಕಿದವು.
Kannada Bible (KNCL) BSI 2016
ಇಸ್ಸಾಕಾರ್, ಆಶೇರ್, ನಫ್ತಾಲಿ ಹಾಗು ಬಾಷಾನಿನ ಪೂರ್ವಮನಸ್ಸೆ ಈ ಪ್ರದೇಶಗಳಲ್ಲಿ ಇದ್ದ ಹದಿಮೂರು ನಗರಗಳನ್ನು ಕುಟುಂಬಗಳಿಗೆ ಅನುಗುಣವಾಗಿ ಗೇರ್ಷೋಮನ ಗೋತ್ರಕ್ಕೆ ಕೊಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೇರ್ಷೋಮನ ಪುತ್ರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ ಹದಿಮೂರು ಪಟ್ಟಣಗಳು ದೊರಕಿದ್ದವು.