1 Chronicles 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೋಲನ ಗಂಡುಮಕ್ಕಳು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರೆಲ್ಲಾ ಕುಲಪ್ರಧಾನರಾಗಿದ್ದರು. ಇವರೂ ಇವರ ಸಂತತಿಯವರೂ ರಣವೀರರಾಗಿದ್ದರು. ಅವರ ಸಂತತಿಯು ವೃದ್ಧಿಯಾದ ಕಾರಣ ಅರಸನಾದ ದಾವೀದನ ಸಮಯದಲ್ಲಿ ಅವರಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಕಾಲಾಳುಗಳು ಯುದ್ಧಕ್ಕೆ ತಯಾರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು.
Kannada BSI Bible 2016
ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೋಲನ ಮಕ್ಕಳಾದ ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್, ಸಮುವೇಲ್ ಇವರು ತೋಲವಂಶದ ಕುಟುಂಬಗಳಲ್ಲಿ ಪ್ರಧಾನಪುರುಷರೂ ರಣವೀರರೂ ಆಗಿದ್ದರು. ತೋಲವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು.
Kannada Bible (KNCL) BSI 2016
ತೋಲನಿಗೆ ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್, ಸಮುವೇಲ್ ಎಂಬ ಆರು ಜನ ಮಕ್ಕಳಿದ್ದರು. ಇವರು ತೋಲ ಗೋತ್ರದ ಕುಟುಂಬಗಳ ಮುಖ್ಯಸ್ಥರೂ ಪ್ರಸಿದ್ಧ ವೀರರೂ ಆಗಿದ್ದರು. ಅರಸ ದಾವೀದನ ಕಾಲದಲ್ಲಿ ಅವರ ವಂಶಜರ ಸಂಖ್ಯೆ - 22,600:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೋಲನ ಪುತ್ರರು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುಯೇಲ್. ಇವರು ತಮ್ಮ ಕುಟುಂಬಗಳಿಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ದಾವೀದನ ದಿವಸಗಳಲ್ಲಿ ಅವರ ಲೆಕ್ಕ 22,600 ಮಂದಿ ಆಗಿತ್ತು.