1 Chronicles 7:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ಎಫ್ರಾಯೀಮನ ಹೆಂಡತಿಯು ಇನ್ನೊಂದು ಗಂಡುಮಗುವನ್ನು ಹೆತ್ತಳು. ತಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆಯ ನೆನಪಿಗಾಗಿ ಇವನಿಗೆ ‘ಬೆರೀಯ’ ಎಂದು ಹೆಸರಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಆಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು.
Kannada BSI Bible 2016
ಅವನು ತನ್ನ ಹೆಂಡತಿಯನ್ನು ಕೂಡಿದಾಗ ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯನೆಂಬ ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಹೆಂಡತಿಯನ್ನು ಕೂಡಲು ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೊದಗಿದ ಆಪತ್ತಿನಲ್ಲಿ ಸಂಭವಿಸಿದದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು.
Kannada Bible (KNCL) BSI 2016
ಅನಂತರ ಅವನು ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗರ್ಭಧರಿಸಿ ಗಂಡು ಮಗುವಿಗೆ ಜನ್ಮವಿತ್ತಳು. ತಮ್ಮ ಕುಟುಂಬಕ್ಕೆ ಬಂದಿದ್ದ ಕಂಟಕದ ಜ್ಞಾಪಕಾರ್ಥವಾಗಿ ಅವನಿಗೆ ಬೆರೀಯ ಎಂದು ಹೆಸರಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಹೆಂಡತಿಯ ಬಳಿಗೆ ಸೇರಿದಾಗ, ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯ ಎಂದು ಹೆಸರಿಟ್ಟನು.