1 Chronicles 7:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮನ ಮಗಳ ಹೆಸರು ಶೇರಾ. ಅವಳು ಕೆಳಗಿನ ಬೇತ್‌ಹೋರೋನ್ ಮತ್ತು ಮೇಲಿನ ಬೇತ್‌ಹೋರೋನ್ ಮತ್ತು ಕೆಳಗಿನ ಉಜ್ಜೇನ್‌ಶೇರ ಮತ್ತು ಮೇಲಿನ ಉಜ್ಜೇನ್‌ಶೇರ ಪಟ್ಟಣಗಳನ್ನು ಕಟ್ಟಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು.
Kannada BSI Bible 2016
ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್‌ಹೋರೋ ನನ್ನೂ, ಉಜ್ಜೇನ್‌ಶೇರವನ್ನೂ ಕಟ್ಟಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೇರ ಎಂಬವಳು ಅವನ ಮಗಳು; ಈಕೆಯು ಮೇಲಣ ಮತ್ತು ಕೆಳಗಣ ಬೇತ್‍ಹೋರೋನ್ ಎಂಬ ಪಟ್ಟಣಗಳನ್ನೂ ಉಜ್ಜೇನ್‍ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.
Kannada Bible (KNCL) BSI 2016
ಎಫ್ರಯಿಮನಿಗೆ ಶೇರ ಎಂಬ ಮಗಳು ಇದ್ದಳು. ಈಕೆ ಮೇಲಿನ ಹಾಗು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನೂ ಉಜ್ಜೇನ್ ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ಪುತ್ರಿಯ ಹೆಸರು ಶೇರಳು. ಇವಳು ಕೆಳಗಿನ ಬೇತ್ ಹೋರೋನ್, ಮೇಲಿನ ಬೇತ್ ಹೋರೋನ್ ಮತ್ತು ಉಜ್ಜೇನ್ ಶೇರವನ್ನೂ ಕಟ್ಟಿಸಿದಳು.