1 Chronicles 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ.
Kannada BSI Bible 2016
ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕ ಮಂದಿ ಹೆಂಡರೂ ಮಕ್ಕಳೂ ಉಳ್ಳ ಇವರ ಗೋತ್ರಕುಟುಂಬಗಳಿಗೆ ಸೇರುವ ಯುದ್ಧಭಟರು ಮೂವತ್ತಾರು ಸಾವಿರ ಮಂದಿ.
Kannada Bible (KNCL) BSI 2016
ಇವರಿಗೆ ಅನೇಕ ಪತ್ನಿಯರೂ ಮಕ್ಕಳೂ ಇದ್ದು ಅವರ ವಂಶಜರಲ್ಲಿ -36,000 ಪುರುಷರನ್ನು ಸೈನ್ಯದಲ್ಲಿ ಸೇವೆಮಾಡಲು ಒದಗಿಸಿಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರ ಸಂಗಡ ಅವರ ವಂಶಗಳ ಪ್ರಕಾರವೂ, ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ 36,000 ಮಂದಿ ಯುದ್ಧವೀರರ ಗುಂಪುಗಳಿದ್ದವು. ಏಕೆಂದರೆ ಅವರ ಹೆಂಡತಿಯರು, ಮಕ್ಕಳು ಬಹಳ ಮಂದಿ ಇದ್ದರು.